ADVERTISEMENT

ಕೋವಿಡ್, ಲಸಿಕೆ ಸ್ಥಿತಿಗತಿ ಕುರಿತು ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 12:56 IST
Last Updated 10 ಸೆಪ್ಟೆಂಬರ್ 2021, 12:56 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ ಹಾಗೂ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಶುಕ್ರವಾರದಂದು ಉನ್ನತ ಮಟ್ದ ಸಭೆ ನಡೆಸಲಾಯಿತು ಎಂದು ಸರ್ಕಾರಿ ಮೂಲಗಳು ತಿಳಿಸಿದೆ.

ಪ್ರಧಾನಿ ಮೋದಿ ಅವರು ದೇಶದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲಿಸಿದರು. ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹಾಜರಿದ್ದರು.

ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ 35 ಜಿಲ್ಲೆಗಳಲ್ಲಿ ವಾರದಲ್ಲಿ ಶೇಕಡಾ 10ಕ್ಕಿಂತಲೂ ಹೆಚ್ಚು ವರದಿಯಾಗುತ್ತಿವೆ. 30 ಜಿಲ್ಲೆಗಳಲ್ಲಿ ಈ ಪ್ರಮಾಣ ಶೇಕಡಾ 10ರಷ್ಟಾಗಿದೆ ಎಂದು ಅವರು ಮಾಹಿತಿ ನೀಡಿದರು.

ದೇಶದಲ್ಲಿ ಇದುವರೆಗೆ 72 ಕೋಟಿ ಲಸಿಕೆ ಡೋಸ್ ನೀಡಲಾಗಿದೆಎಂದು ಕೇಂದ್ರ ಸರ್ಕಾರವು ಗುರುವಾರ ತಿಳಿಸಿದೆ. ಈ ಪೈಕಿ ಶೇಕಡಾ 18ರಷ್ಟು ಮಂದಿ ಎರಡು ಡೋಸ್‌ಗಳನ್ನು ಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.