ADVERTISEMENT

ಪ್ರವೀಣ್‌ ಸೂದ್‌ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆಗೆ ಕೇಂದ್ರ ಒಲವು

​ಪ್ರಜಾವಾಣಿ ವಾರ್ತೆ
Published 6 ಮೇ 2025, 15:25 IST
Last Updated 6 ಮೇ 2025, 15:25 IST
<div class="paragraphs"><p>ಪ್ರವೀಣ್‌ ಸೂದ್‌</p></div>

ಪ್ರವೀಣ್‌ ಸೂದ್‌

   

ನವದೆಹಲಿ: ಸಿಬಿಐ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್‌ ಸೂದ್‌ ಅವರ ಅಧಿಕಾರಾವಧಿಯನ್ನು ಒಂದು ವರ್ಷ ಮುಂದುವರೆಸುವ ಬಗ್ಗೆ ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿದೆ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ ಸೋಮವಾರ ಸಭೆ ನಡೆದಿತ್ತು. ಈ ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಸುಪ್ರೀಂ ಕೋರ್ಟ್‌ನ ಸಿಜೆಐ ಸಂಜೀವ್‌ ಖನ್ನಾ ಭಾಗವಹಿಸಿದ್ದರು.

ADVERTISEMENT

ಸಭೆಯಲ್ಲಿ ಅಂತಿಮವಾಗಿ ಯಾವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂಬ ಬಗ್ಗೆ ನಿಖರ ಮಾಹಿತಿಗಳಿಲ್ಲ. ಆದರೆ, ಸೂದ್‌ ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸುವ ಬಗ್ಗೆ ರಾಹುಲ್‌ ಗಾಂಧಿ ಅವರು ವಿರೋಧ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಪ್ರವೀಣ್‌ ಸೂದ್‌ ಅವರ ಎರಡು ವರ್ಷದ ಅಧಿಕಾರಾವಧಿಯು ಇದೇ ಮೇ 25ಕ್ಕೆ ಮುಕ್ತಾಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.