ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ನೇಮಕ ಕುರಿತ ಸಮಿತಿ ಸಭೆಯು ಸೋಮವಾರ ನಡೆಯಿತು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸಭೆಯಲ್ಲಿ ಭಾಗಿಯಾಗಿದ್ದರು. ಪ್ರಧಾನಿ ಕಚೇರಿಯಲ್ಲಿ ಸಂಜೆ ಸಭೆ ನಡೆಯಿತು.
ಸದ್ಯ ಸಿಬಿಐ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯು ಮೇ 25ರಂದು ಕೊನೆಗೊಳ್ಳಲಿದೆ. 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸೂದ್ ಅವರು 2023ರಲ್ಲಿ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಪ್ರಧಾನಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ಸಮಿತಿಯು ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.