ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರ್ಕಾರಗಳ ಸಚಿವರು ಪ್ರಕರಣವೊಂದರಲ್ಲಿ 30 ದಿನಗಳವರೆಗೆ ಸತತವಾಗಿ ಜೈಲಿನಲ್ಲಿದ್ದರೆ ಅವರನ್ನು ಆ ಹುದ್ದೆಯಿಂದ ತೆಗೆದು ಹಾಕುವ ಸಂಬಂಧ ಕೇಂದ್ರ ಸರ್ಕಾರ ರೂಪಿಸಿರುವ ಮೂರು ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗಿದ್ದು, ಈ ಸಮಿತಿಯನ್ನು ಬಹಿಷ್ಕರಿಸುತ್ತೇವೆ ಎಂದು ಶಿವಸೇನಾ (ಉದ್ಧವ್ ಬಣ) ಸೋಮವಾರ ಘೋಷಿಸಿದೆ.
‘ಸಮಿತಿಗೆ ಸೇರುವುದಿಲ್ಲ’ ಎಂದು ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಈಗಾಗಲೇ ಹೇಳಿವೆ. ‘ಬಿಜೆಪಿಯದ್ದು ಇದೊಂದು ನಾಟಕ’ ಎಂದು ಶಿವಸೇನಾ ಟೀಕಿಸಿದೆ. ‘ಇಂಡಿಯಾ’ ಮೈತ್ರಿಕೂಟದ ಕೆಲವು ಪಕ್ಷಗಳು ಸಮಿತಿಯನ್ನು ಬಹಿಷ್ಕರಿಸಿವೆ. ಕಾಂಗ್ರೆಸ್ ಮಾತ್ರವೇ ಇನ್ನೂವರೆಗೂ ತನ್ನ ನಿರ್ಧಾರ ಬಹಿರಂಗಪಡಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.