ADVERTISEMENT

ಜನ ಸಾಮಾನ್ಯರ ಬಗ್ಗೆ ಚಿಂತಿಸದ ಪ್ರಧಾನಿ: ರಾಹುಲ್‌ ಗಾಂಧಿ

ಪಿಟಿಐ
Published 24 ಮಾರ್ಚ್ 2022, 11:23 IST
Last Updated 24 ಮಾರ್ಚ್ 2022, 11:23 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ ಸಾಮಾನ್ಯರ ಬಗ್ಗೆ ಚಿಂತೆಯೇ ಇಲ್ಲ. ಕೋವಿಡ್‌ ಸೋಂಕಿತರು ಮತ್ತು ಶ್ರಮಿಕ ವರ್ಗದವರ ಮೇಲೂ ಕಾಳಜಿ ಇಲ್ಲ ಎಂದು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಕಳೆದೆರಡು ವರ್ಷಗಳಿಂದ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಳ ಆಗಿದೆ. ಕೇಂದ್ರ ಸರ್ಕಾರ ಹೆಚ್ಚು ಪ್ರಚಾರ ನೀಡಿದ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಕೋವಿಡ್‌ ಸೋಂಕಿತರು ಉಚಿತ ಚಿಕಿತ್ಸೆ ಪಡೆಯಲಾಗಲಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗಲಿಲ್ಲ, ಬಡವರು ಮತ್ತು ಶ್ರಮಿಕ ವರ್ಗದವರು ಕನಿಷ್ಠ ಆದಾಯವನ್ನೂ ಸಂಪಾದಿಸಲು ಸಾಧ್ಯವಾಗುತ್ತಿಲ್ಲ ಹಾಗೂ ನಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳನ್ನು ಉಳಿಸುವ ಪ್ರಯತ್ನಗಳು ನಡೆಯಲಿಲ್ಲ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.