ADVERTISEMENT

ಶಿಕ್ಷಕರ ದಿನಾಚರಣೆ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಸೆಪ್ಟೆಂಬರ್ 2022, 4:17 IST
Last Updated 5 ಸೆಪ್ಟೆಂಬರ್ 2022, 4:17 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಅಲ್ಲದೆ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಅಧ್ಯಾಪಕರಿಗೆ ಶುಭಾಶಯ ಕೋರಿದ್ದಾರೆ.

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಎಲ್ಲ ಕಠಿಣ ಪರಿಶ್ರಮ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು ಎಂದು ಹೇಳಿದ್ದಾರೆ.

ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನ ಕಡೆಗೆ ಸಮಾಜವನ್ನು ಕೊಂಡೊಯ್ಯವ ಕಾಯಕಕ್ಕೆ ತಮ್ಮನ್ನು ಅರ್ಪಿಸಿಕೊಂಡ ಗುರುವೃಂದಕ್ಕೆ ಕೃತಜ್ಞತಾ ಪೂರ್ವಕ ನಮನಗಳು. ನಾವೆಲ್ಲರೂ ಕಲಿಯೋಣ, ಕಲಿತದ್ದನ್ನು ಕಲಿಸೋಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.