ADVERTISEMENT

ಭಾರತದ ಭೂಪ್ರದೇಶ ಚೀನಾಕ್ಕೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ: ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2022, 5:13 IST
Last Updated 14 ಸೆಪ್ಟೆಂಬರ್ 2022, 5:13 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಯಾವುದೇ ಹೋರಾಟ ತೋರದೇ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಭೂಪ್ರದೇಶವನ್ನು ಚೀನಾಕ್ಕೆಬಿಟ್ಟುಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಪೂರ್ವ ಲಡಾಖ್‌ನ ಗಡಿ ಪ್ರದೇಶದಿಂದ ಭಾರತ ಹಾಗೂ ಚೀನಾದ ಸೇನಾ ವಾಪಸಾತಿ ಪಕ್ರಿಯೆ ಪೂರ್ಣಗೊಂಡಿದೆ ಎಂದು ವರದಿಯಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 2020 ಏಪ್ರಿಲ್ ತಿಂಗಳ ಯಥಾಸ್ಥಿತಿ ಕಾಯ್ದುಕೊಳ್ಳಲು ಭಾರತ ಮುಂದಿಟ್ಟಿರುವ ಬೇಡಿಕೆಯನ್ನು ಚೀನಾ ತಿರಸ್ಕರಿಸಿದೆ ಎಂದು ಉಲ್ಲೇಖಿಸಿದ್ದಾರೆ.

ಈಗ ಯಾವುದೇ ಹೋರಾಟವಿಲ್ಲದೆ ಪ್ರಧಾನಿ ನರೇಂದ್ರ ಮೋದಿ 1,000 ಚದರ ಕಿ.ಮೀ. ಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ. ಈ ಪ್ರದೇಶವನ್ನು ಹೇಗೆ ಹಿಂಪಡೆಯಲಾಗುತ್ತದೆ ಎಂಬುದನ್ನು ಕೇಂದ್ರ ಸರ್ಕಾರವು ವಿವರಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ಪೂರ್ವ ಲಡಾಖ್‌ ಸೆಕ್ಟರ್‌ನ ಗಸ್ತು ಪಾಯಿಂಟ್ 15ರ ಬಳಿಯ ಗೋಗ್ರಾ ಹಾಟ್ ಸ್ಟ್ರಿಂಗ್ಸ್ ಗಡಿ ಪ್ರದೇಶದಿಂದ ಭಾರತ-ಚೀನಾದ ಸೇನಾ ಪಡೆಗಳು ಸೇನಾ ವಾಪಸಾತಿ ಪ್ರಕಿಯೆ ಪೂರ್ಣಗೊಳಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.