ADVERTISEMENT

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಜತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 30 ನವೆಂಬರ್ 2021, 13:37 IST
Last Updated 30 ನವೆಂಬರ್ 2021, 13:37 IST
ಸಂಸತ್‌ ಭವನದಲ್ಲಿ ಮಂಗಳವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು
ಸಂಸತ್‌ ಭವನದಲ್ಲಿ ಮಂಗಳವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮಂಗಳವಾರ ಸಂಸತ್‌ ಭವನದಲ್ಲಿ ಸಭೆ ನಡೆಸಿದರು.

‘ನಮ್ಮ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರೊಂದಿಗೆ ಸಂಸತ್‌ ಭವನದಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾದಾಗಿನಿಂದ ವಿರೋಧ ಪಕ್ಷಗಳು ವಿವಿಧ ವಿಷಯಗಳ ಚರ್ಚೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕಾರಣ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಕ್ಕೆ ಅಡ್ಡಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.