ADVERTISEMENT

ವಾರಾಣಸಿ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 6:13 IST
Last Updated 9 ನವೆಂಬರ್ 2020, 6:13 IST
ಮೋದಿ
ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಾರಾಣಸಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು.

ಕೃಷಿ, ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದರು.

ಈ ಯೋಜನೆಗಳ ಒಟ್ಟು ಮೊತ್ತ ₹614 ಕೋಟಿ ಎಂದು ಪ್ರಧಾನಿಮಂತ್ರಿಗಳ ಕಚೇರಿ ತಿಳಿಸಿದೆ.

ADVERTISEMENT

ಈ ಯೋಜನೆಗಳ ಫಲಾನುಭವಿಗಳ ಜತೆ ಮೋದಿ ಅವರು ಮಾತುಕತೆಯನ್ನೂ ನಡೆಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಸಂದರ್ಭದಲ್ಲಿ ಹಾಜರಾಗಿದ್ದರು.

ಉದ್ಘಾಟನೆಗೊಂಡ ಯೋಜನೆಗಳಲ್ಲಿ ರಾಮನಗರದ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಆಸ್ಪತ್ರೆ ನವೀಕರಣ ಅಲ್ಲದೆ ಒಳಚರಂಡಿ ಕಾಮಗಾರಿಗಳು, ಗೋವುಗಳ ರಕ್ಷಣೆಗೆ ಮೂಲ ಸೌಕರ್ಯ, ಸಂಪೂರ್ಣಾನಂದ ಕ್ರೀಡಾಂಗಣದಲ್ಲಿ ಆಟಗಾರರಿಗೆ ವಸತಿ ಸಂಕೀರ್ಣ, ಸಾರಾನಾಥ್‌ ಧ್ವನಿ ಮತ್ತು ಬೆಳಕು ಕಾರ್ಯಕ್ರಮಗಳು ಸೇರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.