ADVERTISEMENT

ಗಡಿ ಸಂಘರ್ಷ: ಪ್ರಧಾನಿ ಮೋದಿ ಜೊತೆ ತಡರಾತ್ರಿ ನಡೆದ ಉನ್ನತಮಟ್ಟದ ಸಭೆ

ಏಜೆನ್ಸೀಸ್
Published 17 ಜೂನ್ 2020, 9:36 IST
Last Updated 17 ಜೂನ್ 2020, 9:36 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಭಾರತ–ಚೀನಾ ವಾಸ್ತವ ಗಡಿ ರೇಖೆಯಲ್ಲಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ತುಕಡಿಯೊಂದರ ಕಮಾಂಡಿಂಗ್‌ ಅಧಿಕಾರಿ ಸೇರಿ ಇಪ್ಪತ್ತು ಯೋಧರು ಹುತಾತ್ಮರಾಗಿರುವ ಮಾಹಿತಿ ಖಚಿತವಾಗುತ್ತಿದಂತೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ತಡ ರಾತ್ರಿ ಉನ್ನತಮಟ್ಟದ ಸಭೆ ನಡೆದಿದೆ.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಅವರು ಮಹತ್ವದ ಸಭೆ ನಡೆಸಿದ್ದಾರೆ.

ಸಭೆ ಮಂಗಳವಾರ ರಾತ್ರಿ 10 ಗಂಟೆಯಲ್ಲಿ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಮುಂದಿನ ಬೆಳವಣಿಗೆಿದೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.

ADVERTISEMENT

ಎಎನ್ಐ ಸುದ್ದಿ ಸಂಸ್ಥೆ ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಅಥವಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಈ ಬಗ್ಗೆಯೂ ಸಭೆಯಲ್ಲಿ ಯಚರ್ಚೆ ಮಾಡಲಾಗಿದೆ. ಚೀನಾದ 35 ಸೈನಿಕರು ಮೃತಪಟ್ಟಿದ್ದಾರೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.