ನವದೆಹಲಿ: ‘ಕೊರೊನಾ ಸೋಂಕು ವಿರುದ್ಧದ ಹೋರಾಟಕ್ಕೆ ಸ್ವಚ್ಛ ಭಾರತ ಅಭಿಯಾನವು ದೊಡ್ಡ ಬೆಂಬಲವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದರು.
ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ, ಕಸಮುಕ್ತ ಭಾರತ ಅಭಿಯಾನದ ಸಪ್ತಾಹಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಅವರು,ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ 36 ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕೊರೊನಾ ಸೋಂಕು ಕಡಿವಾಣಕ್ಕೆ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಮುಖಗವಸು ಧರಿಸುವಂತೆಮಕ್ಕಳಿಗೆ ಸಲಹೆ ನೀಡಿದರು.
‘ಈ ಕೇಂದ್ರವು, ಸ್ವಚ್ಛತೆಯ ಪ್ರತೀಕವಾಗಿದ್ದ ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುತ್ತಿರುವ ಗೌರವವಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.