ADVERTISEMENT

ರೈತರ ಖಾತೆಗೆ ಕೇಂದ್ರದ ಹಣ?

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2018, 20:00 IST
Last Updated 27 ಡಿಸೆಂಬರ್ 2018, 20:00 IST
   

ನವದೆಹಲಿ: ಪ್ರತಿ ತಿಂಗಳು ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ನಿರ್ದಿಷ್ಟ ಮೊತ್ತವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಆರ್ಥಿಕ ಸಂಕಷ್ಟದಿಂದ ರೈತರನ್ನು ಪಾರು ಮಾಡಲು ರೂಪಿಸಲಾಗಿರುವ ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸದ್ಯದಲ್ಲಿಯೇ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೈತರಿಗೆ ಹೆಚ್ಚಿನ ವಿಮಾ ಮೊತ್ತ ನೀಡಲು ಬೆಳೆವಿಮೆ ಯೋಜನೆಯನ್ನು ಪರಿಷ್ಕರಿಸುವ ಬಗ್ಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.