ADVERTISEMENT

ಮುಕ್ತ ವ್ಯಾಪಾರ ಒಪ್ಪಂದ: ಪ್ರಧಾನಿ ಮೋದಿ– ರಿಷಿ ಸುನಕ್‌ ಮಾತುಕತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮಾರ್ಚ್ 2024, 15:58 IST
Last Updated 12 ಮಾರ್ಚ್ 2024, 15:58 IST
<div class="paragraphs"><p>ಪ್ರಧಾನಿ ಮೋದಿ– ರಿಷಿ ಸುನಕ್‌ </p></div>

ಪ್ರಧಾನಿ ಮೋದಿ– ರಿಷಿ ಸುನಕ್‌

   

ಪಿಟಿಐ ಚಿತ್ರ

ನವದೆಹಲಿ: ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಮಂಗಳವಾರ ದೂರವಾಣಿ ಕರೆ ಮೂಲಕ ಚರ್ಚೆ ನಡೆಸಿದ್ದಾರೆ.

ADVERTISEMENT

ಈ ಕುರಿತು ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ‘ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ನಮ್ಮ ಬದ್ಧತೆಯ ಬಗ್ಗೆ ಸುನಕ್‌ ಅವರೊಂದಿಗೆ ಚರ್ಚಿಸಲಾಯಿತು’ ಎಂದು ಬರೆದುಕೊಂಡಿದ್ದಾರೆ.

ಮಾತುಕತೆ ವೇಳೆ ಉಭಯ ನಾಯಕರು, ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಪ್ರಗತಿಯನ್ನು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದರು. ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.