ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ. ನಾಸಿಕ್‌ನಲ್ಲಿ ಸಂಭವಿಸಿದ ಬಸ್ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಆಫ್) ಪರಿಹಾರ ಘೋಷಿಸಲಾಗಿದೆ.
ಇಂದು ಮುಂಜಾನೆ ಮಹಾರಾಷ್ಟ್ರದ ನಾಸಿಕ್‌ನ ಔರಂಗಾಬಾದ್ ರಸ್ತೆಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.