ADVERTISEMENT

ಒಬಿಸಿಗಳಿಗೆ ನ್ಯಾಯ ಒದಗಿಸಲು ಬಯಸದ ಮೋದಿ: ಓವೈಸಿ

ಪಿಟಿಐ
Published 8 ನವೆಂಬರ್ 2023, 16:05 IST
Last Updated 8 ನವೆಂಬರ್ 2023, 16:05 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಆಧಾರದ ಮೇಲೆ ಮತ ಕೇಳಲು ಮನವಿ ಮಾಡುತ್ತಿದ್ದಾರೆ. ಆದರೆ, ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಒದಗಿಸಲು ಬಯಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಬುಧವಾರ ಹೇಳಿದ್ದಾರೆ.

ಹಿಂದುಳಿದ ಮುಸ್ಲಿಮರಿಗೆ ಮೀಸಲಾತಿ ತೆಗೆದುಹಾಕುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಶೇಕಡ 27 ರಷ್ಟು ಒಬಿಸಿ ಕೋಟಾವನ್ನು ಅವರು ವಿರೋಧಿಸುತ್ತಾರೆ ಮತ್ತು ಮೀಸಲಾತಿಯ ಮೇಲಿನ ಶೇಕಡ 50 ರಷ್ಟು ಮಿತಿಯನ್ನು ತೆಗೆದುಹಾಕುವುದಿಲ್ಲ ಎಂದು ಹೇಳಿದ್ದಾರೆ ಎಂದರು.

‘ಭಾರತದ ರಾಜಕೀಯದಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯವಿದೆ ಎಂದು ಹೇಳಿದಾಗ, ನನ್ನನ್ನು ರಾಷ್ಟ್ರ ವಿರೋಧಿ ಮತ್ತು ಕೋಮುವಾದಿ ಎಂದು ಕರೆಯಲಾಗುತ್ತದೆ. ಮೋದಿ ಹತಾಶರಾಗಿದ್ದಾರೆ’ ಎಂದರು. 

ADVERTISEMENT

 ಕಾಂಗ್ರೆಸ್ ಮತ್ತು ಬಿಆರ್‌ಎಸ್‌ನ 'ಪರಿವಾರವಾದ' ಮನಸ್ಥಿತಿಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ ಮೋದಿ, ಈ ಪಕ್ಷಗಳು ಎಂದಿಗೂ ಹಿಂದುಳಿದ ಜಾತಿಯ ಅಭ್ಯರ್ಥಿಯನ್ನು ತೆಲಂಗಾಣದ ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.