ADVERTISEMENT

ಸುಗಮ ಕಲಾಪಕ್ಕೆ ಸರ್ವಪಕ್ಷಗಳಲ್ಲಿ ಪ್ರಧಾನಿ ಮೋದಿ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2022, 6:47 IST
Last Updated 7 ಡಿಸೆಂಬರ್ 2022, 6:47 IST
   

ನವದೆಹಲಿ: ಸುಗಮವಾಗಿ ಸದನ ನಡೆಯಲು ಸರ್ವಪಕ್ಷಗಳು ಸಹಕಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಿದರು.

ಬುಧವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸದನ ಆರಂಭವಾಗುವುದಕ್ಕೂ ಮುನ್ನ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಎಲ್ಲಾ ಪಕ್ಷಗಳು ಕಲಾಪವನ್ನು ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದರು. ಯುವ ಸಂಸದರಿಗೆ ಸದನದಲ್ಲಿ ಮಾತನಾಡಲು ಎಲ್ಲಾ ಪಕ್ಷಗಳು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ADVERTISEMENT

ಎಲ್ಲಾ ಪಕ್ಷಗಳು ಯುವ ಸದಸ್ಯರಿಗೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಪ್ರಧಾನಿ ಹೇಳಿದರು.

ಜಿ–20 ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಪ್ರಧಾನಿಗಳು, ಭಾರತದ ನಾಯಕತ್ವವು ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ, ಬದಲಿಗೆ ದೇಶದ ಶಕ್ತಿಯನ್ನು ಜಗತ್ತಿಗೆ ಪ್ರದರ್ಶಿಸುವ ಅವಕಾಶವಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.