ಪ್ರಧಾನಿ ಮೋದಿ
(ಪಿಟಿಐ ಚಿತ್ರ)
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಕೋಲ್ಕತ್ತಗೆ ಆಗಮಿಸಿದ್ದಾರೆ.
ಜಾರ್ಖಂಡ್‌ನಿಂದ ಇಲ್ಲಿಗೆ ಆಗಮಿಸಿದ ಮೋದಿ, ಬಿಗಿ ಭದ್ರತೆಯ ನಡುವೆ ರಸ್ತೆ ಮೂಲಕ ರಾಜಭವನಕ್ಕೆ ತೆರಳಿದರು. ರಾಜಭವನದಲ್ಲಿ ಪ್ರಧಾನಿ ಅವರನ್ನು ರಾಜ್ಯಪಾಲ ಸಿ.ವಿ ಆನಂದ ಬೋಸ್ ಸ್ವಾಗತಿಸಿದರು.
ಇಂದು (ಭಾನುವಾರ) ಅವರು ಉತ್ತರ 24 ಪರಗಣ ಜಿಲ್ಲೆಯ ಬ್ಯಾರಕ್‌ಪುರ, ಹೌರಾದ ಪಂಚಲಾ ಮತ್ತು ಹೂಗ್ಲಿ ಜಿಲ್ಲೆಯ ಚಿನ್ಸುರಾ ಮತ್ತು ಪುರಸುರದಲ್ಲಿ ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.