ADVERTISEMENT

ಸ್ವಾತಂತ್ರ್ಯ ದಿನಾಚರಣೆಯ ಭಾಷಣ: ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಮೋದಿ ಮನವಿ

ಪಿಟಿಐ
Published 30 ಜುಲೈ 2021, 7:17 IST
Last Updated 30 ಜುಲೈ 2021, 7:17 IST
ನರೇಂದ್ರ ಮೋದಿ               –ಪಿಟಿಐ ಚಿತ್ರ
ನರೇಂದ್ರ ಮೋದಿ               –ಪಿಟಿಐ ಚಿತ್ರ   

ನವದೆಹಲಿ: ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣಕ್ಕಾಗಿ ತಮ್ಮ ಅಭಿಪ್ರಾಯಗಳನ್ನು ‘MyGov’ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

‘ನಿಮ್ಮ ಚಿಂತನೆಗಳು ಕೂಡ ಕೆಂಪುಕೋಟೆಯಲ್ಲಿ ಪ್ರತಿಧ್ವನಿಸಲಿವೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

‘ಪ್ರಧಾನಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸುತ್ತಾರೆ. ಕಳೆದ ಕೆಲವು ವರ್ಷಗಳಂತೆ ಈ ಬಾರಿಯೂ ಹೊಸ ಭಾರತದ ಬಗ್ಗೆ ತಮ್ಮ ಅಭಿ‍ಪ್ರಾಯಗಳು, ಸಲಹೆಗಳನ್ನು ನೀಡುವಂತೆ ಮೋದಿ ಕೋರಿದ್ದಾರೆ. ಪ್ರಧಾನಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸಲಹೆಗಳನ್ನೂ ಉಲ್ಲೇಖಿಸಲಿದ್ದಾರೆ’ ಎಂದು ‘ಮೈ ಗಾವ್‌’ನಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.