ಅಸ್ಸಾಂನಲ್ಲಿ ಮಳೆಯಿಂದ ಬೆಳೆಗಳು ಹಾನಿಗೀಡಾಗಿವೆ
ಪಿಟಿಐ ಚಿತ್ರ
ನವದೆಹಲಿ: ಭಾರಿ ಮಳೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವ ಭರವಸೆ ನೀಡಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಅಸ್ಸಾಂ ಮತ್ತು ಸಿಕ್ಕಿಂ ಮುಖ್ಯಮಂತ್ರಿಗಳಾದ ಹಿಮಂತ ಬಿಸ್ವ ಶರ್ಮಾ ಮತ್ತು ಪ್ರೇಮ್ ಸಿಂಗ್ ತಮಾಂಗ್ ಮತ್ತು ಮಣಿಪುರ ರಾಜ್ಯಪಾಲ ಅಜಯ್ ಭಲ್ಲಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈಶಾನ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ 36 ಕ್ಕೆ ಏರಿದೆ. ಸಿಕ್ಕಿಂ, ಮಣಿಪುರ, ಅಸ್ಸಾಂ ರಾಜ್ಯಗಳಲ್ಲಿ ಸಂಕಷ್ಟಕ್ಕೀಡಾದವರ ಸಂಖ್ಯೆ 5 ಲಕ್ಷಕ್ಕೂ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.