ನರೇಂದ್ರ ಮೋದಿ
(ಪಿಟಿಐ ಚಿತ್ರ)
ಅಹಮದಾಬಾದ್: ಯುವ ಜನತೆಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಪ್ರತಿಪಾದಿಸಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ದೇಶೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಸ್ವಾವಲಂಬಿ ಭಾರತದ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ.
'ನಾವು ಕೌಶಲ್ಯ ಭಾರತ ಯೋಜನೆ ಅನ್ನು ಪ್ರಾರಂಭಿಸಿದ್ದು, ಇದರಡಿಯಲ್ಲಿ ಕೋಟ್ಯಂತರ ಯುವಕರನ್ನು ವಿವಿಧ ಕ್ಷೇತ್ರಗಳಲ್ಲಿ ಸಿದ್ಧಪಡಿಸಲಾಗುತ್ತಿದೆ. ಜಗತ್ತಿಗೆ ವಯಸ್ಕರ ಸಮಸ್ಯೆ ಕಾಡುತ್ತಿದೆ. ಅವರಿಗೆ ಯುವಜನರ ಅಗತ್ಯವಿದೆ. ಜಗತ್ತಿಗೆ ಯುವಜನತೆಯನ್ನು ಒದಗಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ' ಎಂದು ಉಲ್ಲೇಖಿಸಿದ್ದಾರೆ.
'ಯುವಜನರು ಕೌಶಲ್ಯ ಬೆಳೆಸಿಕೊಂಡರೆ ಹೆಚ್ಚಿನ ಉದ್ಯೋಗಾವಕಾಶಗಳಿವೆ. ಅವರು ಸ್ವಾವಲಂಬಿಗಳಾಗುತ್ತಾರೆ. ಇದು ಹೆಚ್ಚಿನ ಬಲವನ್ನು ತುಂಬುತ್ತದೆ' ಎಂದು ಬಾಲಕಿಯರ ಹಾಸ್ಟೆಲ್ ಉದ್ಘಾಟಿಸಿ ಪ್ರಧಾನಿ ಮಾತನಾಡಿದ್ದಾರೆ.
ಹೆಣ್ಣುಮಕ್ಕಳ ಪ್ರಗತಿಯಲ್ಲಿ ಸಮಾಜದ ಬೆಂಬಲವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.