ADVERTISEMENT

ಹಿಮಾಚಲ ಪ್ರದೇಶ: ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 12 ನವೆಂಬರ್ 2023, 9:54 IST
Last Updated 12 ನವೆಂಬರ್ 2023, 9:54 IST
<div class="paragraphs"><p>ದೀಪಾವಳಿಗೆ ಸೈನಿಕರಿಗೆ ಸಿಹಿ ತಿನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ</p></div>

ದೀಪಾವಳಿಗೆ ಸೈನಿಕರಿಗೆ ಸಿಹಿ ತಿನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ

   

ಚಿತ್ರ ಕೃಪೆ: ಎಕ್ಸ್‌ @narendramodi

ಲೆಪ್ಚಾ (ಹಿಮಾಚಲ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದರು.

ADVERTISEMENT

ಇಂದು (ಭಾನುವಾರ) ಬೆಳಿಗ್ಗೆ ಮೋದಿ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದು, ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಮೂಲಕ ಭದ್ರತಾ ಪಡೆಗಳ ಧೈರ್ಯ ಮತ್ತು ಸಾಹಸವನ್ನು ಶ್ಲಾಘಿಸಿದರು.

ಸೈನಿಕರೊಂದಿಗೆ ಸಂವಾದ ನಡೆಸುತ್ತಿರುವ ಛಾಯಾಚಿತ್ರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ನಮ್ಮ ಕೆಚ್ಚೆದೆಯ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸುವುದು ಉತ್ತಮ ಭಾವನೆಯಾಗಿದ್ದು, ಹೆಮ್ಮೆಯ ಅನುಭವವಾಗಿದೆ’ ಎಂದು ತಿಳಿಸಿದರು.

‘ಸೈನಿಕರು ತಮ್ಮ ಕುಟುಂಬಗಳಿಂದ ದೂರವಿದ್ದು, ದೇಶದ ರಕ್ಷಣೆಗೆ ಕಾವಲುಗಾರರಾಗಿ ತಮ್ಮನ್ನು ಸಮರ್ಪಿಸಿಕೊಳ್ಳುವ ಮೂಲಕ ನಮ್ಮ ಜೀವನವನ್ನು ಬೆಳಗಿಸುತ್ತಾರೆ. ಅವರ ತ್ಯಾಗ ಮತ್ತು ಸಮರ್ಪಣೆ ದೇಶದ ಜನತೆಯನ್ನು ಸುರಕ್ಷಿತವಾಗಿರಿಸುತ್ತದೆ. ಈ ವೀರರಿಗೆ ದೇಶವು ಯಾವಾಗಲೂ ಕೃತಜ್ಞರಾಗಿರಬೇಕು’ ಎಂದು ಮೋದಿ ಹೇಳಿದರು.

'ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ಈ ವಿಶೇಷ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ' ಎಂದು ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ಪ್ರಧಾನಿ ಮೋದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.