ADVERTISEMENT

ಭಾರತಕ್ಕೆ ಬರಲು ಇಚ್ಛಿಸುವ ಸಿಖ್‌, ಹಿಂದೂಗಳಿಗೆ ಆಶ್ರಯಕ್ಕೆ ಮೋದಿ ಸೂಚನೆ

ಪಿಟಿಐ
Published 17 ಆಗಸ್ಟ್ 2021, 20:10 IST
Last Updated 17 ಆಗಸ್ಟ್ 2021, 20:10 IST
ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತೆ ಮೇಲಿನ ಸಂಪುಟ ಸಮಿತಿ ಸಭೆ ನಡೆಯಿತು –ಪಿಟಿಐ ಚಿತ್ರ
ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತೆ ಮೇಲಿನ ಸಂಪುಟ ಸಮಿತಿ ಸಭೆ ನಡೆಯಿತು –ಪಿಟಿಐ ಚಿತ್ರ   

ನವದೆಹಲಿ: ಭಾರತಕ್ಕೆ ಬರಲು ಇಚ್ಛಿಸುವ ಅಫ್ಗಾನಿಸ್ತಾನದ ಸಿಖ್‌ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದರು.

ತಾಲಿಬಾನ್‌ ಅಟ್ಟಹಾಸದಿಂದಾಗಿ ಅಫ್ಗಾನಿಸ್ತಾನದಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ನಡೆದ ರಾಷ್ಟ್ರೀಯ ಭದ್ರತೆ ಮೇಲಿನ ಸಂಪುಟ ಸಮಿತಿಯ ಉನ್ನತ ಮಟ್ಟದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

‘ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು. ಸಹಾಯಕ್ಕಾಗಿ ಭಾರತದತ್ತ ಮುಖ ಮಾಡಿರುವ ಆ ದೇಶದ ಸಹೋದರ, ಸಹೋದರಿಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಬೇಕು’ ಎಂದರು.

ADVERTISEMENT

ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌, ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್‌ ಶೃಂಗ್ಲಾ, ಅಫ್ಗಾನಿಸ್ತಾನದಲ್ಲಿನ ಭಾರತ ರಾಯಭಾರಿ ರುದ್ರೇಂದ್ರ ಟಂಡನ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.