ಸತ್ಯೇಂದ್ರ ದಾಸ್
-ಪಿಟಿಐ ಚಿತ್ರ
ನವದೆಹಲಿ: ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ದಾಸ್ ಅವರು ತಮ್ಮ ಸಂಪೂರ್ಣ ಜೀವನವನ್ನು ಶ್ರೀರಾಮನಿಗೆ ಅರ್ಪಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಆಚರಣೆಗಳು ಮತ್ತು ಧಾರ್ಮಿಕತೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ದೇಶದ ಆಧ್ಯಾತ್ಮಿಕ ಜಗತ್ತಿಗೆ ದಾಸ್ ಅವರು ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಅವರನ್ನು ಸದಾ ನೆನಪಿನಲ್ಲಿ ಇರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಸತ್ಯೇಂದ್ರ ದಾಸ್ ಅವರು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಬುಧವಾರ ನಿಧನರಾಗಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 85 ವರ್ಷದ ಸತ್ಯೇಂದ್ರ ದಾಸ್ ಅವರನ್ನು ಫೆಬ್ರುವರಿ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.