ADVERTISEMENT

ಅಸ್ಸಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ: ಗುವಾಹಟಿಯಲ್ಲಿ ರೋಡ್‌ ಶೋ

ಪಿಟಿಐ
Published 17 ಜನವರಿ 2026, 16:07 IST
Last Updated 17 ಜನವರಿ 2026, 16:07 IST
ಗುವಾಹಟಿಯ ಲೋಕಪ್ರಿಯ ಗೋಪಿನಾಥ್‌ ಬೋರ್ದೋಲೋಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸ್ವಾಗತಿಸಿದರು –ಪಿಟಿಐ ಚಿತ್ರ
ಗುವಾಹಟಿಯ ಲೋಕಪ್ರಿಯ ಗೋಪಿನಾಥ್‌ ಬೋರ್ದೋಲೋಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸ್ವಾಗತಿಸಿದರು –ಪಿಟಿಐ ಚಿತ್ರ   

ಗುವಾಹಟಿ: ಅಸ್ಸಾಂ ರಾಜ್ಯದ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಗುವಾಹಟಿಯಲ್ಲಿ ವರ್ಣರಂಜಿತ ರೋಡ್‌ ಶೋ ನಡೆಸಿದರು.

ಲೋಕಪ್ರಿಯ ಗೋಪಿನಾಥ್‌ ಬೋರ್ದೋಲೋಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಿನ ರಾಷ್ಟ್ರೀಯ ಹೆದ್ದಾರಿ–17ರ ವೃತ್ತದಿಂದ ಆರಂಭವಾದ ರೋಡ್‌ ಶೋ ನಾಲ್ಕು ಕಿ.ಮೀ. ದೂರವನ್ನು ಕ್ರಮಿಸಿ ಅಜಾರಾದಲ್ಲಿ ಕೊನೆಗೊಂಡಿತು. ಕಪ್ಪು ಬಣ್ಣದ ಎಸ್‌ಯುವಿಯ ಮುಂಭಾಗದಲ್ಲಿ ಕುಳಿತಿದ್ದ ಮೋದಿ ಜನರತ್ತ ಕೈ ಬೀಸಿದರು.

ಸರುಸಜೈನಲ್ಲಿರುವ ಅರ್ಜುನ್‌ ಭೋಗೇಶ್ವರ್‌ ಬರುವಾ ಕ್ರೀಡಾ ಸಂಕೀರ್ಣದ ಇಂದಿರಾ ಗಾಂಧಿ ಅಥ್ಲೆಟಿಕ್‌ ಸ್ಟೇಡಿಯಂನಲ್ಲಿ 10 ಸಾವಿರಕ್ಕೂ ಹೆಚ್ಚು ಕಲಾವಿದರಿಂದ ನಡೆದ ಬೋಡೊ ಸಮುದಾಯದ ಸಾಂಪ್ರದಾಯಿಕ ಬಾಗುರುಂಬಾ ನೃತ್ಯವನ್ನು ವೀಕ್ಷಿಸಿದರು.

ADVERTISEMENT

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಪಕ್ಷದ ಹಿರಿಯ ನಾಯಕರು ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಿ ಅವರು ತಮ್ಮ ಎರಡು ದಿನಗಳ ಪ್ರವಾಸದ ವೇಳೆ, ಸುಮಾರು ₹7 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.