ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ಪ್ರಧಾನಿ ಮೆಟೆ ಫ್ರೆಡೆರಿಕ್ಸನ್ ಅವರೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು.
ಭಾರತ–ಡೆನ್ಮಾರ್ಕ್ ‘ಗ್ರೀನ್ ಸ್ಟಾಟೆರ್ಜಿಕ್’ ಒಪ್ಪಂದವನ್ನು ಬೆಂಬಲಿಸುವ ಬಗ್ಗೆ ಪುನರುಚ್ಚರಿಸಿದ ಉಭಯ ನಾಯಕರು, ಎಲ್ಲ ವಲಯಗಳಲ್ಲಿ ಪರಸ್ಪರ ಸಹಕಾರವನ್ನು ಇನಷ್ಟು ವೃದ್ಧಿಸುವ ಬಗ್ಗೆ ಮಾತನಾಡಿದರು.
‘ಪ್ರಧಾನಿ ಮೆಟೆ ಅವರೊಂದಿಗೆ ಮಾತುಕತೆ ನಡೆಸಿರುವುದು ಸಂತೋಷ ನೀಡಿದೆ. ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ’ ಎಂದು ಪ್ರಧಾನಿ ಮೋದಿ ‘ಎಕ್ಸ್’ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.