ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ತೆರಳಿದ ಪ್ರಧಾನಿ ಮೋದಿ
ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.
ಜೋಹಾನೆಸ್ ಬರ್ಗ್‌ನಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ, ಜಿ20 ಶೃಂಗಸಭೆಯ ಹೊರತಾಗಿ ಆರನೇ ಐಬಿಎಸ್ಎ ಶೃಂಗಸಭೆಯಲ್ಲೂ ಭಾಗವಹಿಸಲಿದ್ದಾರೆ.
‘ವಸುಧೈವ ಕುಟುಂಬಕಂ’ ಮತ್ತು ‘ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ’ ಎಂಬ ನಮ್ಮ ಘೋಷ ವಾಕ್ಯದ ಅನುಗುಣವಾಗಿ ಭಾರತದ ದೃಷ್ಟಿಕೋನವನ್ನು ಶೃಂಗಸಭೆಯಲ್ಲಿ ಪ್ರಸ್ತುತಪಡಿಸುತ್ತೇನೆ’ ಎಂದು ಮೋದಿ ಪ್ರಯಾಣ ಆರಂಭಿಸುವ ಮುನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2024ರ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಜಿ20 ಗುಂಪಿನ ಅಧ್ಯಕ್ಷತೆಯನ್ನು ವಹಿಸಿಕೊಂಡಿತ್ತು. ಹೀಗಾಗಿ ನ.22ರಿಂದ 23ರವರೆಗೆ ಜೋಹಾನೆಸ್ ಬರ್ಗ್‌ನಲ್ಲಿ ನಡೆಯಲಿರುವ ಸಭೆಯ ಆತಿಥ್ಯ ವಹಿಸಿಕೊಳ್ಳಲಿದೆ. ಈ ಮೂಲಕ ಜಿ20 ಶೃಂಗಸಭೆಯು ಮೊದಲ ಬಾರಿಗೆ ಆಫ್ರಿಕಾ ನೆಲದಲ್ಲಿ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.