ವಡೋದರಾ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿದ್ದು, ಸೋಮವಾರ ಬೆಳಿಗ್ಗೆ ವಡೋದರಾದಲ್ಲಿ ಬಂದಿಳಿದಿದ್ದಾರೆ.
ತಮ್ಮ ಭೇಟಿಯ ಮೊದಲ ಭಾಗದಲ್ಲಿ ವಡೋದರಾದಲ್ಲಿ ಆಯೋಜನೆಗೊಂಡಿರುವ ಬೃಹತ್ ರೋಡ್ ಶೋದಲ್ಲಿ ಅವರು ಪಾಲ್ಗೊಂಡರು.
ಇದರೊಂದಿಗೆ ದಹೋದ್, ಭುಜ್ ಮತ್ತು ಗಾಂಧಿನಗರದಲ್ಲಿ ಆಯೋಜನೆಗೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ₹82,950 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅವರು ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 10ಕ್ಕೆ ವಡೋದರಾಗೆ ಪ್ರಧಾನಿ ಮೋದಿ ಬಂದಿಳಿದರು. ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ವಾಯುಸೇನೆ ನಿಲ್ದಾಣದವರೆಗೆ ನಡೆದ ರೋಡ್ ಶೋದಲ್ಲಿ ಅವರು ಪಾಲ್ಗೊಂಡರು.
ರಸ್ತೆಯ ಇಕ್ಕೆಲಗಳಲ್ಲೂ ನಿಂತಿದ್ದ ಜನರು ಹೂವನ್ನು ಚೆಲ್ಲಿ, ಪಾಕಿಸ್ತಾನ ವಿರುದ್ಧದ ‘ಆಪರೇಷನ್ ಸಿಂಧೂರ’ಕ್ಕೆ ಅಭಿನಂದನೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.