ADVERTISEMENT

ಕ್ವಾಡ್ ಶೃಂಗ: 40 ಗಂಟೆಗಳಲ್ಲಿ ಜಪಾನ್‌ನ 23 ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ

ಪಿಟಿಐ
Published 21 ಮೇ 2022, 14:04 IST
Last Updated 21 ಮೇ 2022, 14:04 IST
ನರೇಂದ್ರ ಮೋದಿ
ನರೇಂದ್ರ ಮೋದಿ    

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 24ರಂದು ಟೋಕಿಯೊದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಆಸ್ಟ್ರೇಲಿಯಾ ಹಾಗೂ ಜಪಾನ್‌ನ ಪ್ರಧಾನಮಂತ್ರಿಗಳ ಜತೆ ಸಭೆ ಸೇರಿದಂತೆ ಒಟ್ಟು 40 ಗಂಟೆಗಳ ಅವಧಿಯಲ್ಲಿ 23 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮೋದಿ ಅವರು ವ್ಯಾಪಾರ, ರಾಜತಾಂತ್ರಿಕ ಮಾತುಕತೆ ನಡೆಸಲಿದ್ದಾರೆ. ಜಪಾನಿನ 30 ಸಿಇಒ ಹಾಗೂ ಮತ್ತು ಭಾರತೀಯ ಸಮುದಾಯದ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಕ್ರೇನ್ ಮೇಲೆ ರಷ್ಯಾ ಆರಂಭಿಸಿರುವ ಯುದ್ಧದ ನಡುವೆ ನಡೆಯುತ್ತಿರುವ ಶೃಂಗಸಭೆಯಲ್ಲಿ ಮೋದಿ ಅವರು ಬೈಡೆನ್ ಮತ್ತು ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಜೊತೆಗೂ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.