ADVERTISEMENT

ನ.8ಕ್ಕೆ ಪ್ರಧಾನಿಯಿಂದ ಕರ್ತಾರ್‌ಪುರ ಕಾರಿಡಾರ್‌ ಉದ್ಘಾಟನೆ

ಪಿಟಿಐ
Published 12 ಅಕ್ಟೋಬರ್ 2019, 20:00 IST
Last Updated 12 ಅಕ್ಟೋಬರ್ 2019, 20:00 IST
   

ನವದೆಹಲಿ: ಬಹುನಿರೀಕ್ಷಿತ ಕರ್ತಾರ್‌ಪುರ ಕಾರಿಡಾರ್‌ನ ಭಾರತದ ಬದಿಯ ಚೆಕ್‌ಪೋಸ್ಟ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ನ.8ರಂದು ಉದ್ಘಾಟಿಸಲಿದ್ದಾರೆ.

‘72 ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಸಾಧ್ಯವಾಗದೆ ಹೋಗಿದ್ದನ್ನು ಪ್ರಧಾನಿ ಮೋದಿ ಈಗ ಸಾಧ್ಯವಾಗಿಸಿದ್ದಾರೆ.ಪಾಕಿಸ್ತಾನದ ಕರ್ತಾರ್‌ಪುರ ಸಾಹಿಬ್‌ಗೆ ಸಂಪರ್ಕ ಕಲ್ಪಿಸುವ ಕರ್ತಾರ್‌ಪುರ ಕಾರಿಡಾರ್‌ ಕನಸು ಕೊನೆಗೂ ನನಸಾಗುತ್ತಿದೆ’ ಎಂದು ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT