ADVERTISEMENT

ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ 

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 6:10 IST
Last Updated 3 ಅಕ್ಟೋಬರ್ 2020, 6:10 IST
ಪ್ರಧಾನಿ ಮೋದಿ ಅವರಿಂದ ಸುರಂಗ ಮಾರ್ಗ ಉದ್ಘಾಟನೆ
ಪ್ರಧಾನಿ ಮೋದಿ ಅವರಿಂದ ಸುರಂಗ ಮಾರ್ಗ ಉದ್ಘಾಟನೆ   

ಶಿಮ್ಲಾ: ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಉದ್ಘಾಟನೆ ಮಾಡಿದರು.

ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ , ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಅವರೂ ಭಾಗವಹಿಸಿದ್ದರು.

ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಮಾರ್ಗ ಮನಾಲಿ–ಲೇಹ್‌ ನಡುವಿನ ದೂರವನ್ನು 46. ಕಿ.ಮೀ ನಷ್ಟು ಕಡಿತಗೊಳಿಸುವ ಜತೆಗೆ, ನಾಲ್ಕರಿಂದ ಐದು ಗಂಟೆಗಳವರೆಗೆ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲಿದೆ.

ADVERTISEMENT

ಈ ಹಿಂದೆ ವರ್ಷದಲ್ಲಿ ಆರು ತಿಂಗಳು ಈ ಮಾರ್ಗದಲ್ಲಿ ಹಿಮಪಾತವಾಗುತ್ತಿದ್ದರಿಂದ, ಅರ್ಧ ವರ್ಷ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತಿತ್ತು. ಈಗ ಸುರಂಗ ನಿರ್ಮಾಣವಾಗಿರುವುದರಿಂದ, ವರ್ಷಪೂರ್ತಿ ಮನಾಲಿಯಿಂದ ಲಹೌಲ್‌ – ಸ್ಪಿತಿ ಕಣಿವೆಗೆ ಸಂಚರಿಸಬಹುದಾಗಿದೆ.

ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ (ಎಂಎಸ್ಎಲ್) 3,000 ಮೀಟರ್ (10,000 ಅಡಿ) ಎತ್ತರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಈ ಸುರಂಗವನ್ನು ನಿರ್ಮಿಸಲಾಗಿದೆ.

ಈ ಸುರಂಗ 10 ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.