ನವದೆಹಲಿ: ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವವನ್ನು ಇಲ್ಲಿನ ತಲಕ್‌ಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ ಸೇರಿದಂತೆ ಕೇಂದ್ರ ಸಚಿವರು ಭಾಗವಹಿಸಿದ್ದರು.
ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮ ಎರಡು ದಿನಗಳ ಕಾಲ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.