ನವದೆಹಲಿ: ಗಗನಯಾನಿ ಸುನಿತಾ ವಿಲಿಯಮ್ಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಆಹ್ವಾನಿಸಿದ್ದಾರೆ.
ಸಚಿವ ಜಿತೇಂದ್ರ ಸಿಂಗ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಪತ್ರದ ಮೂಲಕ ಸುನಿತಾ ಅವರನ್ನು ಆಹ್ವಾನಿಸಿದ್ದಾರೆ.
ಮಾರ್ಚ್ 1ರಂದು ಬರೆದ ಪತ್ರವನ್ನು ನಿನ್ನೆ ಜಿತೇಂದ್ರ ಸಿಂಗ್ ಹಂಚಿಕೊಂಡಿದ್ದಾರೆ. ನಿಮ್ಮನ್ನು ಭಾರತದಲ್ಲಿ ನೋಡುವೆ ಎಂದು ಮೋದಿ ಪತ್ರದಲ್ಲಿ ಹೇಳಿದ್ದಾರೆ.
ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಜೋ ಬಿಡೆನ್ ಅವರನ್ನು ಭೇಟಿಯಾದಾಗ ನಿಮ್ಮ ಆರೋಗ್ಯದ ಬಗ್ಗೆ ವಿಚಾರಿಸಿದ್ದೆ ಎಂದು ಮೋದಿ ಪತ್ರದಲ್ಲಿ ಹೇಳಿದ್ದಾರೆ.
140 ಕೋಟಿ ಭಾರತೀಯರು ನಿಮ್ಮ ಸಾಧನೆಗಳ ಬಗ್ಗೆ ಯಾವಾಗಲೂ ಹೆಮ್ಮೆಪಡುತ್ತಾರೆ ಎಂದು ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.