
ಪಿಟಿಐ
ನವದೆಹಲಿ: ವ್ಯಾಪಾರ, ಹೂಡಿಕೆ, ಇಂಧನ ಮತ್ತು ಕಡಲ ಭದ್ರತೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಭಾರತೀಯ ಸಮುದಾಯ, ಕೈಗಾರಿಕೆ ಮತ್ತು ವ್ಯಾಪಾರ ಪ್ರತಿನಿಧಿಗಳೊಂದಿಗೂ ಮೋದಿ ಸಂವಾದ ನಡೆಸಲಿದ್ದಾರೆ ಎಂದಿದೆ.
ಭಾರತ–ಮಲೇಷ್ಯಾ ನಡುವಿನ ದ್ವಿಪಕ್ಷೀಯ ಬಾಂಧವ್ಯ 2024ರಲ್ಲಿ ಬಲವರ್ಧನೆಗೊಂಡ ಬಳಿಕ, ಪ್ರಧಾನಿ ಅವರು ಮಲೇಷ್ಯಾಕ್ಕೆ ಮೂರನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.