ಇಂಫಾಲ/ ಚುರಾಚಂದಾಪುರ: ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಳಾಂತರಗೊಂಡು ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಜನರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಫಾಲದ ಐತಿಹಾಸಿಕ ಕಾಂಗ್ಲಾ ಕೋಟೆ ಸಂಕೀರ್ಣದಲ್ಲಿ ನೆಲೆಸಿರುವ ಕುಟುಂಬಗಳ ಕಳವಳಗಳನ್ನು ಮೋದಿ ಆಲಿಸಿದರು. ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲು ಕೇಂದ್ರದ ಬದ್ಧತೆಯ ಬಗ್ಗೆ ಅವರಿಗೆ ಭರವಸೆ ನೀಡಿದರು ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ಅವರು ಚುರಾಚಂದಾಪುರದ ಶಾಂತಿ ಮೈದಾನದಲ್ಲಿ ನಿರಾಶ್ರಿತರೊಂದಿಗೆ ಸಂವಾದ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನಾಂಗೀಯ ಹಿಂಸಾಚಾರದಿಂದಾಗಿ ಸುಮಾರು 60,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಅವರಲ್ಲಿ , ಕುಕಿ ಸಮುದಾಯದ ಸುಮಾರು 40,000 ಹಾಗೂ ಮೈತೇಯಿ ಸಮುದಾಯದ 20,000 ಮಂದಿ ಸೇರಿದ್ದಾರೆ. ಅನೇಕರು ಹೊರ ರಾಜ್ಯಗಳಿಗೆ ಸ್ಥಳಾಂತರಗೊಂಡಿದ್ದಾರೆ. ಹೆಚ್ಚಿನವರು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.
2023ರ ಮೇ ನಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಘಟನೆಯಲ್ಲಿ 260ಕ್ಕೂ ಹೆಚ್ಚು ಜನ ಮೃತಪಟ್ಟು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.