ಮಣಿಪುರದಲ್ಲಿ ಮೋದಿ
ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭಗೊಂಡು ಎರಡಕ್ಕೂ ಹೆಚ್ಚು ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಆ ರಾಜ್ಯಕ್ಕೆ ಇಂದು ಬಂದು ಇಳಿದರು.
ಮಣಿಪುರದ ಇಂಫಾಲ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಮತ್ತು ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್ ಅವರು ಸ್ವಾಗತಿಸಿದರು.
ಅಂದಾಜು ₹8,500 ಕೋಟಿ ಮೊತ್ತದ 31 ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಅವರು ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಣಿಪುರದಲ್ಲಿ ಭಾರಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಬುಡಕಟ್ಟು ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ 2023ರಲ್ಲಿ ನಡೆದ ಜನಾಂಗೀಯ ಸಂಘರ್ಷ ದಲ್ಲಿ ಸುಮಾರು 260 ಮಂದಿ ಮೃತಪಟ್ಟಿ ದ್ದರು. ಇಷ್ಟೆಲ್ಲಾ ಹಿಂಸಾಚಾರ ನಡೆದರೂ ಪ್ರಧಾನಿ ಮೋದಿ ಅವರು ಸಂಘರ್ಷ ಪೀಡಿತ ರಾಜ್ಯಕ್ಕೆ ಭೇಟಿ ನೀಡಲು ಮನಸ್ಸು ಮಾಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು.
ಎರಡು ಕಾರ್ಯಕ್ರಮ: ಕುಕಿ ಸಮುದಾಯದ ಜನರು ಹೆಚ್ಚಿರುವ ಚುರಾಚಾಂದಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ₹7,300 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.