ರಾಷ್ಟ್ರಪತಿ ದ್ರೌಪದಿ ಮರ್ಮು ಮತ್ತು ಅಮಿತ್ ಶಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ರಾಷ್ಟ್ರಪತಿ ಭವನವು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಆದರೆ, ಯಾವ ವಿಚಾರದ ಬಗ್ಗೆ ಮಾತುಕತೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ.
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ವಿಪಕ್ಷಗಳು ಪಟ್ಟು ಹಿಡಿದಿರುವ ಕಾರಣ ಪ್ರಧಾನಿ ಅವರು ರಾಷ್ಟ್ರಪತಿಯವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಶೇ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಮತ್ತು ರಾಷ್ಟ್ರಪತಿ ಭೇಟಿ ನಡೆದಿರುವುದು ಮಹತ್ವ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.