ADVERTISEMENT

ತಮಿಳರಿಗೆ ಅಧಿಕಾರ: ಸಂವಿಧಾನದ 13ನೇ ತಿದ್ದುಪಡಿ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 17:47 IST
Last Updated 8 ಫೆಬ್ರುವರಿ 2020, 17:47 IST
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಸ್ವಾಗತಿಸಿದರು –ಪಿಟಿಐ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಸ್ವಾಗತಿಸಿದರು –ಪಿಟಿಐ ಚಿತ್ರ   

ನವದೆಹಲಿ: ತಮಿಳು ಭಾಷಿಕರು ಹೆಚ್ಚಿರುವ ಪ್ರದೇಶಗಳಿಗೆ ಅಧಿಕಾರ ಹಂಚಿಕೆಗೆ ಅನುವು ಮಾಡಿಕೊಡಲಿರುವ ದ್ವೀಪರಾಷ್ಟ್ರದ ಸಂವಿಧಾನದ 13ನೇ ತಿದ್ದುಪಡಿಯನ್ನು ಅನುಷ್ಠಾನಗೊಳಿಸುವಂತೆ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

ಭಾರತದ ಪ್ರವಾಸದಲ್ಲಿರುವ ಮಹಿಂದ ರಾಜಪಕ್ಸ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ‘ತಮಿಳು ಸಮುದಾಯದ ಆಶೋತ್ತರಗಳಿಗೆ ಶ್ರೀಲಂಕಾ ಸರ್ಕಾರ ಸ್ಪಂದಿಸುವ ವಿಶ್ವಾಸ ಇದೆ’ ಎಂದರು.

‘ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು’ ಎಂದೂ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.