ADVERTISEMENT

ಭಾರತವನ್ನು ಕ್ರೀಡಾ ಶ್ರೇಷ್ಠತೆಯ ಜಾಗತಿಕ ಕೇಂದ್ರ ಮಾಡಲು ಬದ್ಧ: ಪ್ರಧಾನಿ ಮೋದಿ

ಪಿಟಿಐ
Published 29 ಆಗಸ್ಟ್ 2025, 4:34 IST
Last Updated 29 ಆಗಸ್ಟ್ 2025, 4:34 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ನವದೆಹಲಿ: ಕಳೆದ ದಶಕದಲ್ಲಿ ಭಾರತದ ಕ್ರೀಡಾ ವಲಯವು ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಕ್ರೀಡಾಪಟುಗಳನ್ನು ಬೆಂಬಲಿಸಲು, ಮೂಲಸೌಕರ್ಯಗಳನ್ನು ನಿರ್ಮಿಸಲು ಮತ್ತು ಭಾರತವನ್ನು ಕ್ರೀಡಾ ಶ್ರೇಷ್ಠತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ADVERTISEMENT

‘ಎಲ್ಲರಿಗೂ ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು! ಈ ವಿಶೇಷ ಸಂದರ್ಭದಲ್ಲಿ, ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ಶ್ರೇಷ್ಠತೆಯು ಹಲವು ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇದೆ’ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಳೆದ ದಶಕದಲ್ಲಿ, ಭಾರತದ ಕ್ರೀಡಾ ವಲಯವು ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ ಎಂದು ಅವರು ಹೇಳಿದರು.

‘ಯುವ ಪ್ರತಿಭೆಗಳನ್ನು ಪೋಷಿಸುವ ತಳಮಟ್ಟದ ಕಾರ್ಯಕ್ರಮಗಳಿಂದ ಹಿಡಿದು ವಿಶ್ವ ದರ್ಜೆಯ ಸೌಲಭ್ಯಗಳನ್ನು ರಚಿಸುವವರೆಗೆ, ನಮ್ಮ ರಾಷ್ಟ್ರದಲ್ಲಿ ನಾವು ರೋಮಾಂಚಕ ಕ್ರೀಡಾ ಪರಿಸರ ವ್ಯವಸ್ಥೆಯನ್ನು ನೋಡುತ್ತಿದ್ದೇವೆ’ ಎಂದು ಮೋದಿ ಹೇಳಿದರು.

ನಮ್ಮ ಸರ್ಕಾರ ಕ್ರೀಡಾಪಟುಗಳನ್ನು ಬೆಂಬಲಿಸಲು, ಮೂಲಸೌಕರ್ಯಗಳನ್ನು ನಿರ್ಮಿಸಲು ಮತ್ತು ಭಾರತವನ್ನು ಕ್ರೀಡಾ ಶ್ರೇಷ್ಠತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ಬದ್ಧವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.