ADVERTISEMENT

ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ, ಪ್ರಾರ್ಥನೆ

ಪಿಟಿಐ
Published 2 ಮಾರ್ಚ್ 2025, 14:30 IST
Last Updated 2 ಮಾರ್ಚ್ 2025, 14:30 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ಗಿರ್ ಸೋಮನಾಥ: ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ಇಂದು (ಭಾನುವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ADVERTISEMENT

ಮೂರು ದಿನಗಳ ಕಾಲ ಗುಜರಾತ್ ಭೇಟಿಯಲ್ಲಿರುವ ಪ್ರಧಾನಿ ಮೋದಿ, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

12 ಜ್ಯೋತಿರ್ಲಿಂಗದಲ್ಲಿ ಮೊದಲನೆಯದಾದ ಸೋಮನಾಥ ಶಿವ ದೇಗುಲದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಳಿಕ ಸೋಮನಾಥ ದೇವಾಲಯಕ್ಕೆ ಭೇಟಿ ನೀಡುವುದಾಗಿ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.