ಛತ್ತೀಸಗಢದ ‘ಬಾಮಲೇಶ್ವರಿ’ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮೋದಿ
ರಾಜನಂದಗಾಂವ್ (ಛತ್ತೀಸಗಢ): ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸಗಢದ ರಾಜನಂದಗಾಂವ್ ಜಿಲ್ಲೆಯಲ್ಲಿರುವ ‘ ಮಾ ಬಾಮಲೇಶ್ವರಿ‘ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.
ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದ ಚಂದ್ರಗಿರಿ ಜೈನ ದೇವಾಲಯಕ್ಕೆ ಭೇಟಿ ನೀಡಿದ ಅವರು ಪ್ರಾರ್ಥನೆ ಸಲ್ಲಿಸಿದರು. ನರೇಂದ್ರ ಮೋದಿ ಅವರು ಸಂತ ವಿದ್ಯಾಸಾಗರ ಮಹಾರಾಜರಿಂದ ಆಶೀರ್ವಾದ ಪಡೆದರು.
ಇಲ್ಲಿನ ಡೊಂಗರಗಢದಲ್ಲಿ ನಡೆಯಲಿರುವ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.
ಮುಂಬರುವ ಛತ್ತೀಸಗಢ ಚುನಾವಣೆಗೆ ಪೂರ್ವಭಾವಿಯಾಗಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ, ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಅನ್ನು ಕೆಳಗಿಳಿಸಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.