ADVERTISEMENT

ಇಂದಿರಾಗಾಂಧಿ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿಯಿಂದ ಗೌರವ ನಮನ

ಪಿಟಿಐ
Published 31 ಅಕ್ಟೋಬರ್ 2020, 4:30 IST
Last Updated 31 ಅಕ್ಟೋಬರ್ 2020, 4:30 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ:ಮಾಜಿ ಪ್ರಧಾನಿದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದ್ದಾರೆ.

ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯನ್ನು 1984ರಲ್ಲಿ ಆಕೆಯ ಅಂಗರಕ್ಷಕರೇ ಹತ್ಯೆ ಮಾಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಿ ಅವರ ಪುಣ್ಯ ತಿಥಿಯಂದು ನಮನಗಳು ಎಂದಿದ್ದಾರೆ.

ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದ್ದಾರೆ.

ADVERTISEMENT

ಸುಳ್ಳಿನಿಂದ ಸತ್ಯದೆಡೆಗೆ. ಕತ್ತಲೆಯಿಂದ ಬೆಳಕಿನೆಡೆಗೆ. ಸಾವಿನಿಂದ ಜೀವನದೆಡೆಗೆ. ಈ ಮಾತುಗಳ ಪ್ರಕಾರ ಬದುಕುವುದರ ಅರ್ಥವೇನೆಂದು ನನಗೆ ತೋರಿಸಿದ್ದಕ್ಕಾಗಿ ಧನ್ಯವಾದಗಳು ದಾದಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಮತ್ತು ಮಾಜಿ ಪ್ರಧಾನ ಮಂತ್ರಿಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ಕಳೆದ ಭಾನುವಾರವೂ ಮಾಸಿಕ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇಂಧಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದರು. 'ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯನ್ನು ಕಳೆದುಕೊಂಡೆವು. ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ' ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.