ADVERTISEMENT

ಸರ್ದಾರ್ ವಲ್ಲಭಭಾಯ್ ಪಟೇಲ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಪಿಟಿಐ
Published 15 ಡಿಸೆಂಬರ್ 2020, 6:20 IST
Last Updated 15 ಡಿಸೆಂಬರ್ 2020, 6:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುಣ್ಯ ತಿಥಿ ದಿನವಾದ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಅರ್ಪಿಸಿದ್ದಾರೆ. ವಲ್ಲಭಭಾಯ್ ಪಟೇಲ್ ಅವರು ಪ್ರಬಲ ಮತ್ತುಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ‘ಉಕ್ಕಿನ ಮನುಷ್ಯ’ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

‘ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ತೋರಿಸಿದ ಹಾದಿಯು ನಮ್ಮ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ರಕ್ಷಿಸಲು ಸದಾ ಸ್ಫೂರ್ತಿ ನೀಡುತ್ತದೆ’ ಎಂದು ಅವರು ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ವಲ್ಲಭಭಾಯ್ ಪಟೇಲ್ ಅವರು ಭಾರತದ ಮೊದಲ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದರು. ಸ್ವಾತಂತ್ರ್ಯದ ಬಳಿಕ ನೂರಾರು ರಾಜ ಸಂಸ್ಥಾನಗಳನ್ನು ಭಾರತದ ಒಕ್ಕೂಟದೊಂದಿಗೆ ಏಕೀಕರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.