ADVERTISEMENT

ವಲ್ಲಭಭಾಯಿ ಪಟೇಲ್‌ ಪುಣ್ಯ ಸ್ಮರಣೆ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2023, 5:31 IST
Last Updated 15 ಡಿಸೆಂಬರ್ 2023, 5:31 IST
<div class="paragraphs"><p>ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರ  ಪ್ರತಿಮೆ,&nbsp; ಪ್ರಧಾನಿ ನರೇಂದ್ರ ಮೋದಿ  </p></div>

ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆ,  ಪ್ರಧಾನಿ ನರೇಂದ್ರ ಮೋದಿ

   

–ಪಿಟಿಐ ಚಿತ್ರ 

ಬೆಂಗಳೂರು: ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. 

ADVERTISEMENT

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳು. ಅವರ ದೂರದೃಷ್ಟಿಯ ನಾಯಕತ್ವ, ರಾಷ್ಟ್ರದ ಏಕತೆಗಾಗಿ ಅವರ ಬದ್ಧತೆಯು ಆಧುನಿಕ ಭಾರತ ನಿರ್ಮಾಣಕ್ಕೆ ನಾಂದಿ ಹಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್‌‘ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಒಕ್ಕೂಟ ಭಾರತವನ್ನು ಕಟ್ಟಿದ ಉಕ್ಕಿನ ಮನುಷ್ಯ, ಸ್ವಾತಂತ್ರ್ಯ ಹೋರಾಟದ ಶಕ್ತಿ, ಮಹಾನ್‌ ವ್ಯಕ್ತಿ, ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪುಣ್ಯ ಸ್ಮರಣೆಯಂದು ಗೌರವ ನಮನಗಳು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸಾಮಾಜಿಕ ಜಾಲತಾಣ ‘ಎಕ್ಸ್‌‘ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಾಷ್ಟ್ರೀಯ ಏಕತೆಯ ಶಿಲ್ಪಿ, ನವಭಾರತದ ಉಕ್ಕಿನ ಮನುಷ್ಯ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಪುಣ್ಯತಿಥಿಯಂದು ಗೌರವ ನಮನಗಳು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.