ಬೃಹದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
(ಚಿತ್ರ–@PTI_News0
ಗಂಗೈಕೊಂಡ ಚೋಳಪುರಂ(ತಮಿಳುನಾಡು): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿನ ಚೋಳರ ಕಾಲದ ಬೃಹದೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ವೈದಿಕ ಮತ್ತು ಶೈವ ತಿರುಮುರೈ ಮಂತ್ರಗಳ ನಡುವೆ, ಪ್ರಧಾನಿ ಮೋದಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ದೇವಾಲಯದ ಅರ್ಚಕರು ಪೂರ್ಣ ಕುಂಭ ಎಂಬ ಸಾಂಪ್ರದಾಯಿಕ ಗೌರವಗಳೊಂದಿಗೆ ಪ್ರಧಾನಿಯನ್ನು ಬರಮಾಡಿಕೊಂಡರು.
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ತಮಿಳುನಾಡಿಗೆ ಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.