ಉತ್ತರಾಖಂಡ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಉತ್ತರಾಖಂಡಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಿಥೋರಗಢದ ಪಾರ್ವತಿ ಕುಂಡ್‌ಗೆ ಭೇಟಿ ನೀಡಿ ಆದಿ ಕೈಲಾಸ್ ತುದಿಯಲ್ಲಿ ಶಿವನಿಗೆ ಪೂಜೆ ಸಲ್ಲಿಸಿದ್ದಾರೆ.
ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಉಡುಗೆಯಾದ ಪೇಟ ಮತ್ತು ಉಣ್ಣೆಯ ಶಾಲನ್ನು ತೊಟ್ಟು ಮೋದಿ ಅವರು ಪಾರ್ವತಿ ಕುಂಡ್‌ನ ತಟದಲ್ಲಿನ ಶಿವ –ಪಾರ್ವತಿ ದೇವಸ್ಥಾನದಲ್ಲಿ ಆರತಿ ಬೆಳಗಿದ್ದಾರೆ.
ಅಲ್ಲಿಂದ, ಗಡಿಭಾಗದಲ್ಲಿರುವ ಜುಂಜಿ ಎನ್ನುವ ಗ್ರಾಮ ತೆರಳಿ ಸ್ಥಳೀಯ ಜನರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ್ದಾರೆ. ಜತೆಗೆ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮಳಿಗೆಗೆ ತೆರಳಿ ವೀಕ್ಷಣೆ ಮಾಡಿದ್ದಾರೆ. ಪ್ರಧಾನಿ ಮೋದಿಯವರೊಂದಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ತೆರಳಿದ್ದರು.
ಪಿಥೋರಗಢದಲ್ಲಿ ಪ್ರಧಾನಿ ಅವರು ₹4,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.