ADVERTISEMENT

ಮನಮೋಹನ್‌ ಸಿಂಗ್ ಜನ್ಮದಿನ: ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಂದ ಶುಭಾಶಯ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 5:14 IST
Last Updated 26 ಸೆಪ್ಟೆಂಬರ್ 2022, 5:14 IST
ಡಾ.ಮನಮೋಹನ್ ಸಿಂಗ್
ಡಾ.ಮನಮೋಹನ್ ಸಿಂಗ್    

ನವದೆಹಲಿ: ಮಾಜಿ ಪ್ರಧಾನಿ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮನಮೋಹನ್ ಸಿಂಗ್ ಅವರು ಜನ್ಮದಿನದ ಸಂಭ್ರಮದಲ್ಲಿದ್ದಾರೆ.

90ನೇ ವಸಂತಕ್ಕೆ ಕಾಲಿಟ್ಟಿರುವ ಮನಮೋಹನ್‌ ಸಿಂಗ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್ ಸಿಂಗ್‌ ಅವರಿಗೆ ಶುಭ ಕೋರಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮಗಳ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಹಲವರು ಶುಭಾಶಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.