ADVERTISEMENT

Ahmedabd Plane Crash: ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ, ಪರಿಶೀಲನೆ

ಪಿಟಿಐ
Published 13 ಜೂನ್ 2025, 4:26 IST
Last Updated 13 ಜೂನ್ 2025, 4:26 IST
   

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಭೇಟಿ ನೀಡಿದ್ದಾರೆ.

ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಬಳಿಕ ಘಟನಾ ಸ್ಥಳಕ್ಕೆ(ಮೇಘನಿನಗರ) ಕಾರಿನಲ್ಲಿ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಇದ್ದರು.

ಆಸ್ಪತ್ರೆಗೆ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ,‌ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.

ADVERTISEMENT

242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಟೇಕ್‌ ಆಫ್‌ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.

ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿದಂತೆ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.