ADVERTISEMENT

ಯಾಸ್‌ ಚಂಡಮಾರುತ: ಸಿದ್ಧತೆ ಪರಿಶೀಲಿಸಿದ ಪ್ರಧಾನಿ

ಪಿಟಿಐ
Published 23 ಮೇ 2021, 11:04 IST
Last Updated 23 ಮೇ 2021, 11:04 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಯಾಸ್‌ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯನ್ನು ನಿರ್ವಹಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳು ನಡೆಸಿರುವ ಸಿದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪರಿಶೀಲಿಸಿದರು.

’ಹೆಚ್ಚಿನ ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು. ಸ್ಥಳದಲ್ಲಿ ವಿದ್ಯುತ್‌ ಕಡಿತ ಮತ್ತು ಸಂವಹನ ಸಂಪರ್ಕ ಸ್ಥಗಿತಗೊಂಡರೆ ತ್ವರಿತವಾಗಿ ಅದನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್‌–19 ರ ಚಿಕಿತ್ಸೆ ಮತ್ತು ಲಸಿಕೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು‘ ಎಂದು ಪ್ರಧಾನಿ ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ಯಾಸ್‌ ಚಂಡಮಾರುತವು ಮೇ 26ರ ಸಂಜೆಯ ಹೊತ್ತಿಗೆ ಗಂಟೆಗೆ 155 ರಿಂದ 165 ಕಿ.ಮೀ ವೇಗದಲ್ಲಿ ಬೀಸುತ್ತಾ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿ ಹಾದುಹೋಗಲಿದೆ. ನಂತರ ಗಾಳಿಯ ವೇಗ ಗಂಟೆಗೆ 185 ಕಿ.ಮೀ ತಲುಪಲಿದೆ. ಇದರಿಂದ ಉಭಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ಗೃಹ ಸಚಿವ ಅಮಿತ್ ಶಾ, ಇತರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.