ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಪಿಟಿಐ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 22ರಿಂದ ಎರಡು ದಿನ ಸೌದಿ ಅರೇಬಿಯಾಕ್ಕೆ ಭೇಟಿ ನೀಡಿಲಿದ್ದಾರೆ ಎಂದು ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅದು ತಿಳಿಸಿದೆ.
2016 ಮತ್ತು 2019ರ ನಂತರ ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ.
ನವದೆಹಲಿಯಲ್ಲಿ 2023ರ ಸೆಪ್ಟೆಂಬರ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್, ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಬಗ್ಗೆ ಚರ್ಚೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.