ADVERTISEMENT

ಅಸ್ಸಾಂ ಪ್ರವಾಹ ಪರಿಸ್ಥಿತಿ: ಸಿ.ಎಂ ಜೊತೆ ಪ್ರಧಾನಿ ಚರ್ಚೆ, ನೆರವಿನ ಭರವಸೆ

ಪಿಟಿಐ
Published 31 ಆಗಸ್ಟ್ 2021, 7:22 IST
Last Updated 31 ಆಗಸ್ಟ್ 2021, 7:22 IST
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ    

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿಕುರಿತು ಚರ್ಚೆ ನಡೆಸಿದರು. ಜೊತೆಗೆ, ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ತಿಳಿಸಿದರು.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಅವರೊಂದಿಗೆ ಚರ್ಚಿಸಿದ್ದೇನೆ. ಪರಿಸ್ಥಿತಿ ನಿಯಂತ್ರಿಸಲು ಕೇಂದ್ರದಿಂದ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದೇನೆ. ನೆರೆ ಪೀಡಿತ ಪ್ರದೇಶಗಳಲ್ಲಿರುವ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ತಿಳಿಸಿದ್ದಾರೆ.

ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಈವರೆಗೆ ಪ್ರವಾಹದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. 17 ಜಿಲ್ಲೆಗಳಲ್ಲಿ, 3.63 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.